ವಿದ್ಯಾರ್ಥಿಗಳ ಬಸ್ ಪಾಸ್ ಜೂ.30 ಕ್ಕೆ ವಿಸ್ತರಣೆ

0 10

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಲು ಅನುಮತಿಸಿದೆ. ಈ ಹಿಂದೆ ನೀಡಿರುವಂತ ಬಸ್ ಪಾಸ್ ಮಾನ್ಯತೆ ಜೂನ್ 30, 2022ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ

Leave A Reply