ಭೀಕರ ಕಾರು ಅಪಘಾತ : ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ದಾರುಣ ಸಾವು !

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಥಾಯ್ಲೆಂಡ್‌ನಲ್ಲಿ ಹೃದಯಾಘಾತದಿಂದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್, ಕ್ರಿಕೆಟ್ ದಂತಕತೆ ಶೇನ್ ವಾರ್ನ್ ಹಠಾತ್ ನಿಧನರಾಗಿದ್ದರು.

ಇದೀಗ ಆಂಡ್ರ್ಯೂ ಸೈಮಂಡ್ಸ್ ಕೂಡ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಕಾಂಗರೋ ನಾಡಿಗೆ ಬರಸಿಡಿಲು ಬಡಿದಂತಾಗಿದೆ.


Ad Widget

Ad Widget

Ad Widget

ಮಾಜಿ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಕ್ವೀನ್ಸ್‌ಲ್ಯಾಂಡ್‌ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಸೈಮಂಡ್ಸ್ ಕೊನೆಯುಸಿರೆಳೆದಿದ್ದಾರೆ. ಸೈಮಂಡ್ಸ್ ನಿಧನದ ನಂತರ ಕ್ರಿಕೆಟ್ ಲೋಕ ಹಾಗೂ ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಶೋಕದ ಅಲೆ ಎದ್ದಿದೆ.

ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಸೈಮಂಡ್ಸ್ 26 ಟೆಸ್ಟ್, 198 ಏಕದಿನ ಹಾಗೂ 14 ಟಿ20 ಪಂದ್ಯಗಳಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದಾರೆ.

ಅತ್ಯುತ್ತಮ ಬ್ಯಾಟ್ಸ್‌ಮನ್, ಚುರುಕಿನ ಬೌಲರ್ ಮತ್ತು ಉತ್ತಮ ಫೀಲ್ಡರ್ ಆಗಿದ್ದರು ಸೈಮಂಡ್ಸ್ ಇವರು ಆಡುತ್ತಿದ್ದ ಸಮಯದಲ್ಲಿ ಎರಡು ಬಾರಿ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದಿತ್ತು.

Leave a Reply

error: Content is protected !!
Scroll to Top
%d bloggers like this: