ಜ್ಞಾನವ್ಯಾಪಿ ಮಸೀದಿಯ ಬಳಿಕ ಜಾಮಿಯಾ ಮಸೀದಿಯ ಸಮೀಕ್ಷೆ ನಡೆಸುವಂತೆ ರಾಜ್ಯದೆಲ್ಲೆಡೆ ಹೆಚ್ಚಿದ ಆಗ್ರಹ !!

ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಇದೀಗ ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿಯನ್ನು ಸಮೀಕ್ಷೆ ನಡೆಸಿ ಹಿಂದೂಗಳಿಗೆ ಬಿಟ್ಟುಕೊಂಡುವಂತೆ ಎಲ್ಲೆಡೆಯಿಂದ ಆಗ್ರಹ ಕೇಳಿ ಬರುತ್ತಿದೆ.

 

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟದಲ್ಲಿರುವ ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಆ ದೇವಸ್ಥಾನ ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಮಸೀದಿಯನ್ನು ತೆರವುಗೊಳಿಸಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪನೆ ಮಾಡಬೇಕೆಂಬ ಆಗ್ರಹ ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಇದೀಗ ಸುಪ್ರೀಂ ಕೋರ್ಟ್ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ಮಾಡಬೇಕೆಂದು ಆದೇಶ ನೀಡಿರುವ ಬೆನ್ನಲ್ಲೇ, ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ಸಮೀಕ್ಷೆ ನಡೆಸಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮರು ನಿರ್ಮಾಣ ಮಾಡಬೇಕೆಂದು ಹಿಂದೂಪರ ಮುಖಂಡರು ಆಗ್ರಹಿಸಿದ್ದಾರೆ.

1784ರಲ್ಲಿ ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಟಿಪ್ಪು ಸುಲ್ತಾನ್ ನಿರ್ಮಾಣ ಮಾಡಿದ್ದ. ಈ ಹಿಂದೆ ಈ ಜಾಗದಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಿತ್ತು. ಆ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಪುರಾವೇ ಎಂಬಂತೆ ಇಂದಿಗೂ ಜಾಮಿಯಾ ಮಸೀದಿಯ ಒಳ ಭಾಗದಲ್ಲಿ ಹಿಂದೂ ದೇವಸ್ಥಾನದಲ್ಲಿರುವ ರೀತಿಯಲ್ಲಿ ಕಲ್ಯಾಣಿ, ಬಾವಿಗಳು ಇವೆ. ಅಲ್ಲದೇ ಮಸೀದಿಯ ಸುತ್ತ ಹಿಂದೂ ದೇವಸ್ಥಾನದ ಕಂಬಗಳು ಕಂಬಗಳ ಮೇಲೆ ಹಿಂದೂ ದೇವರುಗಳ ಮೂರ್ತಿ ಕೆತ್ತನೆಗಳು ಇವೆ.

ಇದಲ್ಲದೇ ಲೂಯಿಸ್ ರೈಸ್ ಬರೆದಿರುವ ಮೈಸೂರು ಗೆಜೆಟ್‍ನಲ್ಲಿ, ಟಿಪ್ಪು ಸುಲ್ತಾನ್ ಪರ್ಷಿಯಾದ ಖಲೀಫನಿಗೆ ಬರೆದಿರುವ ಪತ್ರಗಳಲ್ಲೂ ಹಿಂದೂ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಬರೆಯಾಗಿದೆ. ಇದನ್ನು ಆಧಾರವನ್ನಾಗಿಟ್ಟುಕೊಂಡು ಜಾಮಿಯಾ ಮಸೀದಿಯಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ಆರಾಧನೆಗೆ ಅವಕಾಶ ನೀಡಬೇಕೆಂದು ನರೇಂದ್ರ ಮೋದಿ ವಿಚಾರ ಮಂಚ್‍ನ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತ ಮುಸ್ಲಿಂ ಮುಖಂಡರು, ನಾವು ನಮ್ಮ ತಾತ ಹುಟ್ಟಿದಾಗಿನಿಂದ ಇದು ಜಾಮಿಯಾ ಮಸೀದಿಯೇ ಆಗಿದೆ. ಹೀಗಾಗಿ ಇದು ಮಸೀದಿಯಾಗಿಯೇ ಮುಂದುವರಿಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ಪರಸ್ಪರ ಚರ್ಚೆಯಲ್ಲಿರುವ ಈ ವಿಷಯ ಇನ್ನೆಲ್ಲಿ ಹೋಗಿ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Leave A Reply

Your email address will not be published.