ಮೇ ೨೧ ರಂದು
ಹಡಗಲಿಯ ಗಿರಿಯಾಪುರದಲ್ಲಿ ಡಿಸಿ ಗ್ರಾಮವಾಸ್ತವ್ಯ

ಸಂಜೆವಾಣಿ
ಹೊಸಪೇಟೆ ಮೇ೧೮:ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೀರೆ ಹಡಗಲಿ ಹೋಬಳಿಯ ಗಿರಿಯಾಪುರದಲ್ಲಿ ಮೇ೨೧ ರಂದು ಡಿಸಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ.


ಗ್ರಾಮವಾಸ್ತವ್ಯ ಹೂಡಲಿರುವ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಎದುರು ಗ್ರಾಮಸ್ಥರು ದೂರು-ದುಮ್ಮಾನ ಹಾಗೂ ಸಮಸ್ಯೆಗಳ ಹೇಳಿಕೊಂಡು ಪರಿಹರಿಸಿಕೊಳ್ಳಲು ಸಜ್ಜಾಗಿದ್ದಾರೆ.


ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಿದ್ದು, ಕಾಲಮಿತಿಯಲ್ಲಿ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ.


ಜಿಲ್ಲಾಧಿಕಾರಿಗಳು ಗಿರಿಯಾಪುರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಹೂಡಿದರೆ, ತಾಲೂಕು ಮಟ್ಟದಲ್ಲಿ ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರು ಸಹ ಒಂದೊAದು ಊರುಗಳನ್ನು ಗುರುತಿಸಿ ಗ್ರಾಮಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.


ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ ೩ ಮತ್ತು ಆಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ ೩ ಮತ್ತು ಕಾಲಂ ೯ ತಾಳೆ ಆಗುತ್ತವೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಖಚಿತ ಪಡಿಕೊಳ್ಳುವುದು ಮತ್ತು ಲೋಪಗಳು ಕಂಡುಬAದಿರುವ ಪ್ರಕರಣಗಳನ್ನು ಗುರುತಿಸಿ ವಿಲೇ ಮಾಡಲು ಆದೇಶ ಹೊರಡಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ.


ಪಹಣಿಗಳನ್ನು ಪರಿಶೀಲಿಸಿ ಪೌತಿ ಪ್ರಕರಣಗಳನ್ನು ಗುರುತಿಸಿ ನೈಜ ವಾರಸುದಾರರ ಹೆಸರುಗಳಿಗೆ ಖಾತೆ ಬದಲಾವಣೆ ಮಾಡುವ ಬಗ್ಗೆ ಪೌತಿ ಆದೇಶಗಳನ್ನು ಸಿದ್ದತೆಯಲ್ಲಿಟ್ಟುಕೊಳ್ಳವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು ಪಿಂಚಣಿ ಸೌಲಭ್ಯ ಪಡೆಯದೇ ಇರುವವರಿಂದ ಸಂಬAದಿಸಿದ ದಾಖಲೆಗಳನ್ನು ಸಂಗ್ರಹಿಸಿ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಲು ಕ್ರಮ ಜಿಲ್ಲಾಡಳಿತ ಕೈಗೊಳ್ಳಲಿದೆ.
ಗ್ರಾಮದ ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನಭೂಮಿ ಪರಿಶೀಲಿಸುವುದು, ಒಂದು ವೇಳೆ ಸ್ಮಶಾನಕ್ಕೆ ಜಮೀನು ಅಗತ್ಯವಿದ್ದಲ್ಲಿ ಮೊದಲಿಗೆ ಸರಕಾರಿ ಜಮೀನು ಗುರುತಿಸುವುದು. ಸರಕಾರಿ ಜಮೀನು ಲಭ್ಯವಿಲ್ಲದೇ ಇದ್ದಲ್ಲಿ ಖಾಸಗಿ ಜಮೀನನ್ನು ಗುರುತಿಸಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವುದು. ಆಶ್ರಯ ಯೋಜನೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಗುರುತಿಸಿ ಕಾಯ್ದಿರಿಸಲು ಕ್ರಮವಹಿಸಿ ಪ್ರಸ್ತಾವನೆ ಸಲ್ಲಿಸುವುದು.
ಸರಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನುಗಳು ಅಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂತಹ ಜಮೀನುಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮಕೈಗೊಳ್ಳಲಿದೆ
ಬರ/ಪ್ರವಾಹ ಇದ್ದಲ್ಲಿ ಬರ ಪರಿಸ್ಥಿತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಪ್ರತಿ ನಿತ್ಯ ಕುಡಿಯುವ ನೀರಿನ ತೊಂದರೆ ಬಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಸಮಸ್ಯೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಸರಬರಾಜು ಮಾಡಲು ಕ್ರಮ ವಹಿಸುವುದು, ಪ್ರವಾಹ ಪರಿಸ್ಥಿತಿ ಉದ್ಭವಿಸಿದಲ್ಲಿ ವಿವಿಧ ಹಾನಿಗಳಿಗೀಡಾದ ಸಂತ್ರಸ್ಥರಿಗೆ ಪರಿಹಾರ ನೀಡಲು ಬೇಕಾಗುವ ಎಲ್ಲಾ ತರಹದ ದಾಖಲೆಗಳನ್ನು ಗ್ರಾಮ ಮಟ್ಟದಲ್ಲಿ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ನಿಗಧಿತ ಸಮಯದಲ್ಲಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿ ಪರಿಹಾರ ನೀಡಲು ಕ್ರಮ.


ಕಂದಾಯ ಗ್ರಾಮಗಳ ರಚನೆ, ಹಾಲಿ ಕಂದಾಯ ಗ್ರಾಮಗಳ ಪಕ್ಕದಲ್ಲಿ ಉಪ ಗ್ರಾಮಗಳನ್ನು ೫೦ ಕುಟುಂಬಗಳು, ೨೫೦ ಜನಸಂಖ್ಯೆ, ಮೂಲ ಗ್ರಾಮದಿಂದ ಉಪ ಗ್ರಾಮಕ್ಕೆ ಒಂದು ಕಿ.ಮೀ ಅಂತರವಿರುವ ಹಾಗೂ ಉಪ ಗ್ರಾಮಕ್ಕೆ ಕನಿಷ್ಟ ೧೦೦ ಎಕರೆ ಜಮೀನುಗಳು ಇರುವ ಉಪ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಪ್ರಸ್ತಾವನೆಯನ್ನು ಸಲ್ಲಿಸುವ ಕುರಿತು ಕ್ರಮಕೈಗೊಳ್ಳುವುದು. ಗ್ರಾಮದಲ್ಲಿ ಎಸ್.ಸಿ/ಎಸ್.ಟಿ ಬಿಸಿಎಂ ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮ ವಹಿಸುವುದು. ಗ್ರಾಮದಲ್ಲಿ ಅರ್ಹ ಬಡ ಕುಟುಂಬಗಳಿಗೆ ಈ ವರೆಗೂ ಬಿ.ಪಿ.ಎಲ್ ಕಾರ್ಡ್ ದೊರೆಯದೇ ಇರುವ ಕುಟುಂಬಗಳನ್ನು ಗುರುತಿಸಿ ಅರ್ಹರಿದ್ದಲ್ಲಿ ಬಿ.ಪಿ.ಎಲ್ ಕಾರ್ಡ ನೀಡುವ ಕುರಿತು ಹಾಗೂ ಅನರ್ಹ ಬಿ.ಪಿ.ಎಲ್ ಕಾರ್ಡ್ ಹೊಂದಿರುವವರನ್ನು ಗುರುತಿಸಿ ಸದರಿ ಅನರ್ಹ ಬಿ.ಪಿ.ಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕ್ರಮ.


ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣ:
ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡುವಂತೆ ಸಂಬAಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನವನ್ನು ನೀಡಿ ಆ ಗ್ರಾಮದ ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಜಾತಿ ಮತ್ತು ಆಧಾಯ ಪ್ರಮಾಣ ಪತ್ರಗಳು ಹಾಗೂ ಆಧಾರ ಕಾರ್ಡ ಹೊಂದಿರದವರನ್ನು ಗುರುತಿಸಿ ಆನ್‌ಲೈನ್ ಮುಖಾಂತರ ಸಂಬAಧಿಸಿದ ಹೋಬಳಿಯ ಮಟ್ಟದ ನಾಡ ಕಛೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆಂದು ಸಂಬAದಿಸಿದ ಗ್ರಾಮಗಳಲ್ಲಿ ಭಿತ್ತಿ ಪತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸತಕ್ಕದ್ದು. ಗ್ರಾಮದಲ್ಲಿಯ ಇತರೆ ಕುಂದು ಕೊರತೆಗಳನ್ನು ಸಹ ಆಲಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬು ತಿಳಿಸಿದ್ದಾರೆ.

ವಿವಿಧೆಡೆ ಗ್ರಾಮ ವಾಸ್ತವ್ಯ:
ಮೇ ೨೧ರಂದು ಹೂವಿನಹಡಗಲಿ ತಾಲೂಕಿನ ಹೀರೆ ಹಡಗಲಿ ಹೋಬಳಿಯ ಗಿರಿಯಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ತಹಸೀಲ್ದಾರರು, ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಹೋಬಳಿಯ ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ಅಧಿಕಾರಿಗಳು, ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ಚಿಲಕನಹಟ್ಟಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ಅಧಿಕಾರಿಗಳು, ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹಾರಕಬಾವಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ಅಧಿಕಾರಿಗಳು, ಹರಪನಹಳ್ಳಿ ತಾಲೂಕಿನ ಕಸಬ ಹೋಬಳಿಯ ಕೂಲಹಳ್ಳಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ಅಧಿಕಾರಿಗಳು, ಕೊಟ್ಟೂರು ತಾಲೂಕಿನ ಕೊಟ್ಟೂರು ಹೋಬಳಿಯ ಬೇವೂರು ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ಅಧಿಕಾರಿಗಳು ಗ್ರಾಮ ವ್ಯಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಹಾಗೂ ಅಧಿಕಾರಿಗಳು ಬೆಳಗ್ಗೆ ೧೦.೩೦ರಿಂದ ಸಂಜೆಯವರೆಗೆ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ.

ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೀರೆ ಹಡಗಲಿ ಹೋಬಳಿಯ ಗಿರಿಯಾಪುರದಲ್ಲಿ ಮೇ೨೧ ರಂದು ಡಿಸಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಿದ್ದು, ಕಾಲಮಿತಿಯಲ್ಲಿ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ.
ಮಹೇಶ್ ಬಾಬು,
ಅಪರ ಜಿಲ್ಲಾಧಿಕಾರಿಗಳು,
ವಿಜಯನಗರ.

Leave A Reply

Your email address will not be published.