‘ದ್ವಿತೀಯ ಪಿಯುಸಿ ಪರೀಕ್ಷೆ’ಯ ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಮೇ.20 ಕೊನೆಯ ದಿನ

ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

 

ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 18-05-2022ರಂದು ನಿಗದಿ ಪಡಿಸಿದ್ದ ವೇಳಾಪಟ್ಟಿಯಂತೆ ಮುಕ್ತಾಯವಾಗಿರುತ್ತದೆ ಎಂದು ತಿಳಿಸಿದೆ.

ಮೌಲ್ಯಮಾಪನ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲು ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆಗಳಿಗೆ ಮಾದರಿ ಉತ್ತರಗಳನ್ನು ಸಿದ್ಧಪಡಿಸಿ, ದಿನಾಂಕ 18-05 2022ರ ಇಂದು ಇಲಾಖಾ ವೆಬ್ ಸೈಟ್ pue.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಬರೆದಂತ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಮಾದರಿ ಉತ್ತರಗಳನ್ನು ವೀಕ್ಷಿಸಬಹುದಾಗಿದೆ. ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೇ, ದಿನಾಂಕ 20-05-2022ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವಂತೆ ತಿಳಿಸಿದೆ.

Leave A Reply

Your email address will not be published.