ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರು ಅಪಾಯದಿಂದ ಪಾರು

ಉಪ್ಪಿನಂಗಡಿ: ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿದ ಘಟನೆಯೊಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಪ್ರತೀ ದಿನವೂ ಮಂಗಳೂರು-ಬೆಂಗಳೂರು ಪ್ರಯಾಣಿಸುವ ಭಾರತಿ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ತೀವ್ರ ಮಳೆಯಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave A Reply