BDA : 176 ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ದರ್ಜೆ ( FDA ಮತ್ತು SDA)ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ನುರಿತ ನೌಕರರುಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಜೂನ್ 18 ಕೊನೆಯ ದಿನಾಂಕವಾಗಿದ್ದು, ಪದವೀಧರರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬಿಡಿಎಯಲ್ಲಿ ಸಹಾಯಕ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರ : ಪ್ರಥಮ ದರ್ಜೆ, ದ್ವಿತೀಯ ದರ್ಜೆ
ಸಹಾಯಕರು
ಪ್ರಥಮ ದರ್ಜೆ : 78,
ದ್ವಿತೀಯ ದರ್ಜೆ : 98
ಹುದ್ದೆಗಳ ಸಂಖ್ಯೆ : 176
ಉದ್ಯೋಗ ಸ್ಥಳ : ಬೆಂಗಳೂರು
ವೇತನ : ಬಿಡಿಎ ನಿಯಮಾವಳಿ ಪ್ರಕಾರ
ಈಗಾಗಲೇ ಸರ್ಕಾರದಲ್ಲಿ ಪ್ರಥಮ ದರ್ಜೆ
ಮತ್ತು ದ್ವಿತೀಯ ದರ್ಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ
ನೌಕರರು ಡೆಪ್ಯೂಟೆಷನ್ ಆಧಾರದ ಮೇಲೆ ಬಿಡಿಎನಲ್ಲಿ
ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರಿನಲ್ಲಿ ಕೆಲಸ ಮಾಡುವ ಇತರೆ ಜಿಲ್ಲೆಗಳ ಸರ್ಕಾರಿ ಉದ್ಯೋಗಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಖ್ಯೆ: ಪ್ರಥಮ ದರ್ಜೆಯ 78 ಮತ್ತು ದ್ವಿತೀಯ ದರ್ಜೆಯ 98 ಹುದ್ದೆಗಳಿಗೆ ಸೇರಿದಂತೆ ಒಟ್ಟು 176 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: ಬಿಡಿಎ ನೇಮಕಾತಿ ನಿಯಮಗಳ ಪ್ರಕಾರ
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕುಮಾರ ಪಾರ್ಕ್ ಪಶ್ಚಿಮ, ಟಿ. ಚೌಡಯ್ಯ ರಸ್ತೆ,
ಬೆಂಗಳೂರು-560020