ಮಂಗಳೂರು : ದ.ಕ.ಶಾಲೆಗಳಿಗೆ ರಜೆ ಘೋಷಣೆ| ಭಾರೀ ಮಳೆಯ ಕಾರಣ ರಜೆ ಘೋಷಿಸಿದ ಜಿಲ್ಲಾಧಿಕಾರಿ!

ಮಂಗಳೂರು, ಮೇ.19: ಬಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ.

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಶಿವಮೊಗ್ಗದಲ್ಲಿ ಕೂಡಾ ಶಾಲೆಗಳಿಗೆ ರಜೆ

ಕಳೆದ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಇಡೀ ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ಮೇ 19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.

Leave A Reply