SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ – ವಿಜಯಪುರ ಜಿಲ್ಲೆ ಟಾಪ್!!!
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಈ ವರ್ಷವೂ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ.
ಈ ವರ್ಷ 85.63% ಫಲಿತಾಂಶ ಬಂದಿದೆ.
2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅಮಿತ್ ಮಾದರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಮಿತ್ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಯಾಗಿದ್ದಾರೆ. ತುಮಕೂರಿನ ಭೂಮಿಕಾ ಅವರು ರಾಜ್ಯಕ್ಕೆ 2 ನೇ ಸ್ಥಾನ ಪಡೆದಿದ್ದಾರೆ.
ಮಿಕ್ಕಂತೆ ನಂತರದ ಸ್ಥಾನ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಇಂತಿದೆ
625ಕ್ಕೆ 624 ಅಂಕ ಪಡೆದವರು- 309 ವಿದ್ಯಾರ್ಥಿಗಳು
625ಕ್ಕೆ 623ಅಂಕ ಪಡೆದವರು 472 ವಿದ್ಯಾರ್ಥಿಗಳು
622 ಅಂಕ ಪಡೆದವರು- 615 ವಿದ್ಯಾರ್ಥಿಗಳು
621 ಅಂಕ ಪಡೆದವರು- 706 ವಿದ್ಯಾರ್ಥಿಗಳು
620 ಅಂಕ ಪಡೆದವರು -773 ವಿದ್ಯಾರ್ಥಿಗಳು
ಕೊರೋನಾ ಆತಂಕ, ಹಿಜಾಬ್ ವಿವಾದದ ನಡುವೆ ಪರೀಕ್ಷೆಗೆ ಹಾಜರಾಗಿದ್ದ 8,73,884 ವಿದ್ಯಾರ್ಥಿಗಳ ಪೈಕಿ 8,53,436 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ.
ಈ ಬಾರಿ ವಿಜಯಪುರ ಜಿಲ್ಲೆ ಟಾಪ್ 1, ತುಮಕೂರು 2, ಹಾವೇರಿ 3, ಬೆಳಗಾವಿ 4 ನೇ ಸ್ಥಾನ ಪಡೆದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಬಾರಿ ಅತ್ಯುತ್ತಮ ಮಾರ್ಕ್ಸ್ ಪಡೆದಿದ್ದಾರೆ. ಪ್ರತಿ ಬಾರಿಯಂತೆ ಮೊದಲ ಸ್ಥಾನ ಪಡೆಯುತ್ತಿದ್ದ ದ.ಕ.ಜಿಲ್ಲೆ ಈ ಬಾರಿ ಮೊದಲ ಸ್ಥಾನ ಪಡೆಯದಿರುವುದು ಗಮನಾರ್ಹ ವಿಷಯವಾಗಿದೆ. ಈ ಬಾರಿ ಹಳ್ಳಿ ಸೊಗಡಿನ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿರುವುದು ಅವರು ಪಟ್ಟ ಶ್ರಮಕ್ಕೆ ಸಂದ ಫಲವಾಗಿದೆ.
ಎಸ್ಎಸ್ಎಲ್‌ಸಿ ಫಲಿತಾಂಶ ಚೆಕ್ ಮಾಡುವ ವಿಧಾನ
– ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶ ವೆಬ್‌ಸೈಟ್ https://karresults.nic.in ಗೆ ಭೇಟಿ
ನೀಡಿ. – ಓಪನ್ ಆದ ಪೇಜ್‌ನಲ್ಲಿ ಮೊದಲು ರಿಜಿಸ್ಟ್ರೇಷನ್ ನಂಬರ್ ಟೈಪ್ಚಮಾಡಿ.
– ನಂತರ ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ ಮಾಹಿತಿ
ಸೆಲೆಕ್ಟ್ ಮಾಡಿ ನೀಡಿ.
-‘SUBMIT’ ಎಂಬಲ್ಲಿ ಕ್ಲಿಕ್ ಮಾಡಿ.
– ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರದರ್ಶನವಾಗುತ್ತದೆ.
– ತಮ್ಮ ಫಲಿತಾಂಶವನ್ನು ವಿಷಯವಾರು ಗಳಿಸಿದ ಅಂಕಗಳು, ಒಟ್ಟು ಅಂಕಗಳು, ಶೇಕಡ ಅಂಕಗಳ ಮಾಹಿತಿ ಲಭ್ಯ ಇರುತ್ತದೆ.
– ಮುಂದಿನ ರೆಫರೆನ್ಸ್ ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಮೊಬೈಲ್ ನಲ್ಲೂ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಪಡೆಯಬಹುದು.
ಮೇ 27ರಿಂದ ಪೂರಕ ಪರೀಕ್ಷೆ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮೇ 27ರಿಂದ ಎಸ್‌ಎಸ್ ಎಲ್‌ಸಿ ಪೂರಕ ಪರೀಕ್ಷೆ ನಡೆಯುತ್ತದೆ. ಮೇ 27ರಿಂದ ಜೂನ್ 4ರವರೆಗೆ ನಡೆಯುತ್ತದೆ. ಮೇ 20ರಿಂದ 30ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಇರುತ್ತದೆ.