ಕಿರುತೆರೆ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ನಡೆಸಿದ್ದ ಖಾಸಗಿ ಆಸ್ಪತ್ರೆಗೆ ಬೀಗ!

ಬೆಂಗಳೂರು: ಫ್ಯಾಟ್ ಸರ್ಜರಿ ಮಾಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಕಿರುತೆರೆ ನಟಿ ಚೇತನಾ ರಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗೆ ಬೀಗ ಜಡಿದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ.

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವನಟಿ ಚೇತನಾ ರಾಜ್ ಕೆಲ ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಅಬ್ಬಿಗೆರೆಯಲ್ಲಿ ವಾಸವಿರುವ ನಟಿಯ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದರು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮಗಳ ಸಾವಿನ ಸಂಬಂಧ ಚೇತನಾ ತಂದೆ ವರದರಾಜ್‌ ನೀಡಿರುವ ದೂರಿನ ಅನ್ವಯ, ಸಾವಿನ ರಹಸ್ಯ ಭೇದಿಸಲು ಮುಂದಾಗಿದ್ದ ಸುಬ್ರಹ್ಮಣ್ಯ ನಗರ ಪೊಲೀಸರು, ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆಸ್ಪತ್ರೆಯ ಸಾಹೇಬ್ ಗೌಡ ಶೆಟ್ಟಿ ಸೇರಿದಂತೆ ನಾಲ್ವರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಫ್ಯಾಟ್ ಸರ್ಜರಿಗೆ ಒಳಗಾಗಿ ಮೃತಪಟ್ಟ ನಟಿ ಚೇತನಾ ರಾಜ್, ತನ್ನ ಮೈ ಮೇಲಿದ್ದ ಚಿನ್ನವನ್ನು ಅಡವಿಟ್ಟು ಫ್ಯಾಟ್ ಸರ್ಜರಿಗೆ ದಾಖಲಾಗಿದ್ದ ಸಂಗತಿ ಬಯಲಾಗಿದೆ. ಚೇತನಾ ಸರ್ಜರಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರಿಂದ ಕೇಳಿದರೆ ಹಣ ಕೊಡುವುದಿಲ್ಲ ಎಂಬುದು ಆಕೆಗೆ ಗೊತ್ತಿದ್ದರಿಂದ, ಮನೆಯವರಿಗೆ ಹೇಳದೇ ತನ್ನ ಬಳಿಯಿದ್ದ ಚಿನ್ನವನ್ನು ಅಡವಿಟ್ಟಿದ್ದಾಳೆ.

ಸರ್ಜರಿಗೆ ಒಳಗಾಗಲು ಜಿಮ್ ಟ್ರೈನರ್ ಒಬ್ಬರಿಂದ ಸಲಹೆ ಪಡೆದುಕೊಂಡಿದ್ದಳು ಎಂಬ ಮಾಹಿತಿ ಪೊಲೀಸರಿಗೆ ದೊರಕಿದ್ದು, ಈ ಬಗ್ಗೆ ಚೇತನಾ ಸ್ನೇಹಿತರಿಂದ ಮಾಹಿತಿ ಕಲೆ ಹಾಕಿದ್ದಾರೆ. ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿರುವ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ವರದಿ ಬಂದ ಬಳಿಕ ಕ್ರಮ ಜರುಗಿಸಲಿದ್ದಾರೆ.

Leave a Reply

error: Content is protected !!
Scroll to Top
%d bloggers like this: