ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿ ಎಂ ಬಸವರಾಜ್ ಬೊಮ್ಮಾಯಿಯವರಿಂದ ಭರ್ಜರಿ ಗಿಫ್ಟ್
ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯರವರು ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಿರೋದಾಗಿ ಸಿಎಂ ಹೇಳಿದ್ದಾರೆ.
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಿರುವ ಕುರಿತು ಇಂದು ಸಿಎಂ ಅಧ್ಯಕ್ಷತೆಯಲ್ಲಿ ಜಾತಿ/ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು. ನಂತರ ಮಾಧ್ಯಮದವರೊಂದಿಗೆ ಮಾತನಾಡಿತ ಸಿಎಂ ಬಸವರಾಜ ಬೊಮ್ಮಾಯಿರ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸುವುದಾಗಿ ಹೇಳಿದರು.
ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಮಕ್ಕಳಿಗೆ ಬಸ್ ಪಾಸ್ ನ್ನು ಸಂಪೂರ್ಣ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅನುದಾನವನ್ನು ನೀಡುವುದಲ್ಲದೆ, ನಿಗಮ ಮಂಡಳಿಗಳಿಗೂ ಅನುದಾನವನ್ನು ಒದಗಿಸಲಾಗಿದೆ. ಅದನ್ನೂ ಹೆಚ್ಚಿಸಬೇಕೆಂದು ಎಲ್ಲರ ಅಭಿಪ್ರಾಯವಿದೆ. ಒಂದು ವಾರದಲ್ಲಿ ಅನುದಾನ ಹೆಚ್ಚಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಲು ತೀರ್ಮಾನಿಸಲಾಗಿದೆ ಎಂದು ಮಾತ್ರ ಹೇಳಿದ್ದು, ಆದರೆ ಯಾವೆಲ್ಲ ಕೋರ್ಸ್, ತರಗತಿ ಓದುವ ವಿದ್ಯಾರ್ಥಿಗಳಿಗೆ ಈ ಉಚಿತ ಬಸ್ ಪಾಸ್ ಸೌಲಭ್ಯ ಅನ್ವಯವಾಗಲಿದೆ ಎಂದು ಹೇಳಿಲ್ಲ. ಈ ಕುರಿತು ಅಧಿಕೃತ ನೋಟಿಫಿಕೇಶನ್ / ಆದೇಶಗಳು ಸರ್ಕಾರಿ ಇಲಾಖೆಗಳಿಂದ ಅಥವಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಇತರೆ ಸಾರಿಗೆ ನಿಗಮಗಳ ಮೂಲಕ ಸಿಎಂ ಅಧಿಕೃತ ಆದೇಶದ ನಂತರ ಬಿಡುಗಡೆ ಆಗಬೇಕಿದೆ.