ಬೆಂಗಳೂರು: ಈ ಬಾರಿ ತನ್ನ ಕ್ಷೇತ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 615 ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಟ್ಟು ಅವರ ಮುಂದಿನ ವಿದ್ಯಾಭ್ಯಾಸಕ್ಕೆ, ಉನ್ನತ ಶಿಕ್ಷಣಕ್ಕೆ ಸಹಕರಿಸುತ್ತೇನೆ ಎಂದು ರಾಜರಾಜೇಶ್ವರಿನಗರ ವಿಧಾನ ಸಭಾ ಕ್ಷೇತ್ರದ ಶಾಸಕ, ತೋಟಗಾರಿಕಾ ಸಚಿವ ಮುನಿರತ್ನ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸಚಿವರು ತನ್ನ ಕ್ಷೇತ್ರದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇಡಲಾಗಿದ್ದು, ಮುಂದೆಯೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ತಯಾರಿದ್ದೇನೆ ಎಂದರು.
You must log in to post a comment.