ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಸಿಹಿಸುದ್ದಿ ನೀಡಿದ್ದಾರೆ.

 

ಕೇಂದ್ರ ಸರ್ಕಾರ, ಪೆಟ್ರೋಲ್‌ ಮೇಲಿನ 8 ರೂಪಾಯಿ ತೆರಿಗೆ ಮತ್ತು ಡೀಸೆಲ್‌ ಮೇಲಿನ 6 ರೂಪಾಯಿ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಈ ಮೂಲಕ ಪೆಟ್ರೋಲ್‌ ಬೆಲೆ ದೇಶಾದ್ಯಂತ ರೂ. 9.50 ಮತ್ತು ಡೀಸೆಲ್‌ ಬೆಲೆ ರೂ. 7 ಕಡಿಮೆಯಾಗಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ‘ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 7 ರೂ.ಗಳಷ್ಟು ಕಡಿಮೆ ಮಾಡುತ್ತದೆ’ ಎಂದು ಹೇಳಿದ್ದಾರೆ. ಅಲ್ಲದೆ, ಈ ವರ್ಷ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಲ್ಲದೆ, ದಿನಬಳಕೆ ವಸ್ತುಗಳು, ಹಣ್ಣು – ತರಕಾರಿ, ಸೋಪು, ಶಾಂಪೂ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಇಳಿಕೆಯ ನಿರ್ಧಾರ, 1.10 ಲಕ್ಷ ಕೋಟಿ ಹೆಚ್ಚುವರಿ ರಸಗೊಬ್ಬರ ಸಬ್ಸಿಡಿ, ಕಬ್ಬಿಣ ಮತ್ತು ಸ್ಟೀಲ್ ಉತ್ಪನ್ನಗಳ ಅಬಕಾರಿ ಸುಂಕ ಕಡಿತ, ಕೇಂದ್ರ ಸರ್ಕಾರದಿಂದ ಸಿಮೆಂಟ್ ಬೆಲೆ ಇಳಿಕೆಗೆ ಕ್ರಮ, ಪ್ಲಾಸ್ಟಿಕ್ ಉತ್ಪನ್ನಗಳ ಮೇಲೂ ಅಬಕಾರಿ ಸುಂಕ ಕಡಿತ ಮಾಡಿದೆ. ಹಣದುಬ್ಬರ ತಡೆಯಲು ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಮಾಡಿ ಹಲವು ಕ್ರಮ ಕೈಗೊಂಡಿದೆ.

Leave A Reply

Your email address will not be published.