LPG ಗ್ರಾಹಕರಿಗೆ ಕೇಂದ್ರದಿಂದ ಸಿಹಿ ಸುದ್ದಿ; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ
ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವೆ, ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ (12 ಸಿಲಿಂಡರ್ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ಸಬ್ಸಿಡಿ ಲಭ್ಯವಾಗಲಿದ್ದು, ಆದರೆ ಈ ಸಬ್ಸಿಡಿ ವಿಚಾರಕ್ಕೆ ಷರತ್ತು ಕೂಡ ಹಾಕಲಾಗಿದೆ. ಈ ಸಬ್ಸಿಡಿಯನ್ನು ವಾರ್ಷಿಕವಾಗಿ 12 ಸಿಲಿಂಡರ್‌ಗಳಿಗೆ ಮಾತ್ರ ನೀಡಲಾಗುವುದು ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ‘ಪ್ರಧಾನಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ವರ್ಷ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್‌ಗಳವರೆಗೆ) 200 ರೂಪಾಯಿ ಸಬ್ಸಿಡಿ ನೀಡಲಿದ್ದಾರೆ. ಇದು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಸಹಾಯ ಮಾಡುತ್ತದೆ. ಇದು ಸುಮಾರು 6100 ಕೋಟಿ ವಾರ್ಷಿಕ ಆದಾಯದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.