LPG ಗ್ರಾಹಕರಿಗೆ ಕೇಂದ್ರದಿಂದ ಸಿಹಿ ಸುದ್ದಿ; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವೆ, ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ (12 ಸಿಲಿಂಡರ್ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ಸಬ್ಸಿಡಿ ಲಭ್ಯವಾಗಲಿದ್ದು, ಆದರೆ ಈ ಸಬ್ಸಿಡಿ ವಿಚಾರಕ್ಕೆ ಷರತ್ತು ಕೂಡ ಹಾಕಲಾಗಿದೆ. ಈ ಸಬ್ಸಿಡಿಯನ್ನು ವಾರ್ಷಿಕವಾಗಿ 12 ಸಿಲಿಂಡರ್‌ಗಳಿಗೆ ಮಾತ್ರ ನೀಡಲಾಗುವುದು ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ‘ಪ್ರಧಾನಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ವರ್ಷ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್‌ಗಳವರೆಗೆ) 200 ರೂಪಾಯಿ ಸಬ್ಸಿಡಿ ನೀಡಲಿದ್ದಾರೆ. ಇದು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಸಹಾಯ ಮಾಡುತ್ತದೆ. ಇದು ಸುಮಾರು 6100 ಕೋಟಿ ವಾರ್ಷಿಕ ಆದಾಯದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
Scroll to Top
%d bloggers like this: