ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ | ಕನ್ನಡ ಕಡ್ಡಾಯ, ಅರ್ಜಿ ಸಲ್ಲಿಸಲು ಜೂನ್-6 ಕೊನೆ ದಿನ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕನ್ನಡ ಮಾತನಾಡುವುದು ಕಡ್ಡಾಯ.
ವಯಸ್ಸಿನ ಮಿತಿ: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18, ಗರಿಷ್ಠ ವಯಸ್ಸು 55 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ : ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಹುದ್ದೆಗಳು : 8 ಲೋಡರ್ಗಳು, ಕ್ಲೀನರ್
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ಮಂಡ್ಯ ಜಿಲ್ಲೆ , ಮಂಡ್ಯ, ಕರ್ನಾಟಕಕ್ಕೆ 06-06-2022 ರ ಮೊದಲು ತಲುಪುವಂತೆ ಕಳುಹಿಸಬೇಕು.