ಹುಬ್ಬಳ್ಳಿ : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ : ಓರ್ವ ವ್ಯಕ್ತಿ ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನವಲಗುಂದ ಪಟ್ಟಣದ ಹೊರವಲಯದ ಗೊಬ್ಬರಗುಂಪಿ ಕ್ರಾಸ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಪ್ರಕರಣ ಸೋಮವಾರ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಹಾಲಪ್ಪ ಪೂಜಾರಿ (53) ಮೃತಪಟ್ಟ ವ್ಯಕ್ತಿ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಅಪಘಾತದಲ್ಲಿ ಮೃತಪಟ್ಟವರನ್ನು ಬಾಗಲಕೋಟೆ ಮೂಲದವರು ಎನ್ನಲಾಗುತ್ತಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯೊಂದಿಗಿದ್ದ ಸವಾರ ಸೇರಿದಂತೆ ತಾಲೂಕಿನ ಗೊಬ್ಬರಗುಂಪಿ ಗ್ರಾಮದ ದ್ಯಾಮಪ್ಪ ಹಣಮಂತಪ್ಪ ಓಲೇಕಾರ, ರಮೇಶ್ ಹುಬ್ಬಳ್ಳಿ, ಹಾಲಪ್ಪ ಪೂಜಾರ ಒಟ್ಟು ನಾಲ್ಕು ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗುತ್ತಿದ್ದು, ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

error: Content is protected !!
Scroll to Top
%d bloggers like this: