ಬಜ್ಪೆ:ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

Share the Article

ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.

ಮೇ 17ರಂದು ಆಧಾರ್ ಕಾರ್ಡ್ ಮಾಡಿಸಲೆಂದು ಹೇಳಿ ತನ್ನಿಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಟು ಬಂದಿದ್ದ ಭವ್ಯಶ್ರೀ ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಮಹಿಳೆಯ ಪತಿ ಕಿಶೋರ್ ಬಜ್ಪೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು, ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡು ಪತ್ತೆಗೆ ಸಹಕರಿಸುವಂತೆ ಕೋರಿದ್ದಾರೆ.

Leave A Reply

Your email address will not be published.