ಗ್ರಾಮಾಂತರ ಜಿಲ್ಲಾ‌ ಪಂಚಾಯತಿಯಲ್ಲಿ 50 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.6 ಕೊನೆಯ ದಿನಾಂಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

 

ಹುದ್ದೆಗಳ ವಿವರ :
ಕರವಸೂಲಿಗಾರ- 04
ಡಾಟಾ ಎಂಟ್ರಿ ಆಪರೇಟರ್ – 04
ಅಟೆಂಡೆಂಟ್ – 08
ಕ್ಲೀನರ್ – 34

ಒಟ್ಟು ಹುದ್ದೆ : 50

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ಮೇ 21,2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 6,2022

ವಿದ್ಯಾರ್ಹತೆ : ಈ ಮೇಲಿನ ಹುದ್ದೆಗಳಿಗೆ 10, 12ನೇ ತರಗತಿ/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ವೇತನ : ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ : ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಪಿಡಿಎಫ್ ನೋಟಿಫಿಕೇಶನ್ ನನ್ನು ಕ್ಲಿಕ್ ಮಾಡಿ

Leave A Reply

Your email address will not be published.