ಮಂಗಳೂರು : ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆ ನಿಷೇಧ!

ಮಂಗಳೂರು : ಮೀನುಗಾರರ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಜೂನ್ 1ರಿಂದ ಜುಲೈ 31ರ ವರೆಗೆ ಅಂದರೆ ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗುವುದು ಎಂದು ಮೀನುಗಾರಕಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ
ಹಾಗೂ 10 ಹೆಚ್‌ಪಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು
ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ತಾತ್ಕಾಲಿಕವಾಗಿ
ನಿಷೇಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

10 ಹೆಚ್ಚಪಿ ವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ, ನಾಡದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದೆ. ಪ್ರಕಟಣೆಯಲ್ಲಿ ನೀಡಿದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಕಡಲ ಮೀನುಗಾರಿಕಾ ಕಾಯ್ದೆ 1986ರ ಅನ್ವಯ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ
ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: