ಜೂನ್ ತಿಂಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ !! | ಪರೀಕ್ಷೆ ಕುರಿತಂತೆ ಇನ್ನೂ ಹಲವು ನಿಯಮಗಳನ್ನು ಜಾರಿಗೊಳಿಸಿದ ಕೆಇಎ

ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ. ಇದೀಗ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್‌ ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್ 16, 17 ಹಾಗೂ 18 ರಂದು ಈ ವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಾಬ್ ಸೇರಿದಂತೆ ಧಾರ್ಮಿಕ ಭಾವನೆಗಳ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ನಿಯಮಗಳನ್ನು ಜಾರಿ ಮಾಡಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಧರಿಸುವಂತಿಲ್ಲ. ಹಿಜಾಬ್ ಅಲ್ಲದೇ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ವಸ್ತ್ರಗಳನ್ನು ವಿದ್ಯಾರ್ಥಿಗಳು ಧರಿಸುವಂತಿಲ್ಲ.

ಪರೀಕ್ಷಾ ಕೇಂದ್ರಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಚ್ ನಿಷೇಧ (ಕೈ ಗಡಿಯಾರ) ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವುದಕ್ಕೂ ನಿಷೇಧ ಹಾಕಲಾಗಿದೆ. ಮೊಬೈಲ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಿದ್ದು, ಪ್ರತಿ ಕೇಂದ್ರದಲ್ಲೂ ಕೆಇಎಯಿಂದಲೇ ಗಡಿಯಾರ ಅಳವಡಿಕೆ ಮಾಡಲು ತೀರ್ಮಾನ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಮಾತ್ರ ಅವಕಾಶ ನೀಡಲು ಕೆಇಎ ತೀರ್ಮಾನ ಮಾಡಿದೆ.

Leave a Reply

error: Content is protected !!
Scroll to Top
%d bloggers like this: