ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ

ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?? ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರು ರಾಮಮಂದಿರಕ್ಕಾಗಿ ಇಟ್ಟಿರುವ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜಿಸುತ್ತವೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಮಾತನಾಡಿ, ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತದೆ, ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತದೆ ಎಂದು ನಾನು ಈ ಮೊದಲೇ ಹೇಳಿದ್ದೆ ಎಂದು ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ದೂರಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಾಂಗ್ರೆಸ್ ಮತ್ತು ಪಕ್ಷದ ನಾಯಕರಿಗೆ ಭಗವಾನ್ ಶ್ರೀರಾಮನ ಮೇಲೆ ಯಾಕೆ ಇಷ್ಟೊಂದು ದ್ವೇಷ? ಶತಮಾನಗಳ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುತ್ತಿದೆ. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಟೀಕಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಒಬಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಭರತ್‌ ಸಿಂಗ್ ಸೋಲಂಕಿ, ‘ಬಿಜೆಪಿ ಯಾವಾಗಲೂ ರಾಜಕೀಯ ಲಾಭಕ್ಕಾಗಿ ಭಗವಾನ್ ರಾಮನ ಹೆಸರನ್ನು ಬಳಸುತ್ತಿದೆ. ಲಕ್ಷಾಂತರ ಹಿಂದೂಗಳ ಭಾವನೆಗಳೊಂದಿಗೆ ಆಟವಾಡುತ್ತಿದೆ” ಎಂದಿದ್ದರು.

Leave a Reply

error: Content is protected !!
Scroll to Top
%d bloggers like this: