ಉಗ್ರ ಯಾಸೀನ್ ಮಲಿಕ್ ಗೆ “ಎರಡು ಜೀವಾವಧಿ” ಶಿಕ್ಷೆ ವಿಧಿಸಿದ ಕೋರ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ್ದ ಆರೋಪದ ಮೇಲೆ ದೋಷಿ ಎಂದು ಸಾಬೀತಾಗಿರುವ ಉಗ್ರ ಯಾಸಿನ್ ಮಲಿಕ್ ಗೆ ದೆಹಲಿಯ ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5 ಪ್ರಕರಣಗಳಿಗೆ ಸಂಬಂಧಿಸಿ ಇಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಎರಡು ಜೀವಾವಧಿ ಶಿಕ್ಷೆ ಜೊತೆಗೆ 10 ವರ್ಷಗಳ ಕಠಿಣ ಶಿಕ್ಷೆಯನ್ನು ದೆಹಲಿ ನ್ಯಾಯಾಲಯ ವಿಧಿಸಿದೆ. ಒಂದು ಪ್ರಕರಣದಲ್ಲಿ 10 ಲಕ್ಷ ರೂಪಾಯಿ, ಎರಡನೇ ಪ್ರಕರಣದಲ್ಲಿ 5 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಯಾಸಿನ್ ಮಲಿಕ್‌ನನ್ನು ಭಾರಿ ಭದ್ರತೆಯೊಂದಿಗೆ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಮಾಡುವ ಸಲುವಾಗಿ ಪಾಕಿಸ್ತಾನದಿಂದ ಹಣ ಪಡೆದ ಆರೋಪವನ್ನು ಯಾಸಿನ್ ಮಲಿಕ್ ಮೇಲೆ ಹೊರಿಸಲಾಗಿತ್ತು. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ಎಲ್ಲಾ ಆರೋಪಗಳ ಬಗ್ಗೆ ಯಾಸಿನ್ ಮಲಿಕ್ ಕಳೆದ ಮಂಗಳವಾರ ತಪ್ಪೊ ಪ್ಪಿಕೊಂಡ ನಂತರ ಅವನನ್ನು ಕೋರ್ಟ್ ದೋಷಿ ಎಂದು ಘೋಷಿಸಿತ್ತು.

Leave A Reply

Your email address will not be published.