ವಾಹನ ಸವಾರರೇ ಇಂದೇ ಇಂಧನ ಭರ್ತಿ ಮಾಡಿಕೊಳ್ಳಿ!
ಇಂದೇ ನಿಮ್ಮ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸಿಕೊಳ್ಳಿ. ಇಲ್ಲದಿದ್ದರೆ 31ರ ನಂತರ ಪೆಟ್ರೋಲ್ ಬಂಕ್‍ಗಳಲ್ಲಿ ಇಂಧನ ಸಿಗುವ ಸಾಧ್ಯತೆಗಳಿಲ್ಲ!
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ಇದೇ 31ರ ನಂತರ ಡಿಫೋಗಳಿಂದ ತೈಲ ಖರೀದಿಸದೆ ಪ್ರತಿಭಟನೆ ನಡೆಸಲಿದೆ. ಆದ್ದರಿಂದ ವಾಹನಗಳಿಗೆ ಬಂಕ್‍ಗಳಲ್ಲಿ ಇಂಧನ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ.
2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ 1ರೂ. ಕಮಿಷನ್ ನೀಡಬೇಕೆಂಬುದು ಫೆಡರೇಷನ್‍ನ ಪ್ರಮುಖ ಬೇಡಿಕೆಯಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಬಂಕ್‍ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕು. ಅಲ್ಲದೆ, ಕಂಪೆನಿಗಳ ಡೀಲರ್ಸ್‍ಗಳು ಬಂಕ್‍ಗಳಲ್ಲಿ ಸಿಬ್ಬಂದಿಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಪ್ರತಿಭಟನೆ ನಡೆಸಲಾಗಿದೆ.
ನಾವು ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವ ಉದ್ದೇಶ ಹೊಂದಿಲ್ಲ. ಬಂಕ್ ಮಾಲೀಕರ ಸಂಕಷ್ಟವನ್ನು ಜನರಿಗೆ ತಿಳಿಸುವ ಸದುದ್ದೇಶವಾಗಿದೆ. ನಮ್ಮ ಪ್ರತಿಭಟನೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.