ದೌರ್ಜನ್ಯದಿಂದ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ನೌಕರಿ-ರಾಜ್ಯ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲ ದಿನಗಳ ಹಿಂದಷ್ಟೇ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 1999ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ.

ಈ ತಿದ್ದುಪಡಿ ನಿಯಮದಂತೆ ‘ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ಮೃತ ಕುಟುಂಬಸ್ಥರಿಗೆ ಅನುಕಂಪದ ಆಧಾರದ ನೌಕರಿಯನ್ನು ನೀಡಲಾಗುತ್ತದೆ. ವ್ಯಕ್ತಿ ಮರಣ ಹೊಂದಿದ ದಿನಾಂಕದಿಂದ ಮೂರು ವರ್ಷದ ಒಳಗೆ ಹದಿನೆಂಟು ವರ್ಷಗಳನ್ನು ಪೂರೈಸಿರುವಂತ ಮತ್ತು ತದನಂತರ ಎರಡು ವರ್ಷಗಳೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು’ ಎಂದು ಹೇಳಿದೆ.

Leave A Reply

Your email address will not be published.