ಸುಳ್ಯ:ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು!!

ಸುಳ್ಯ:ಎರಡು ವಾರಗಳ ಹಿಂದೆ ಸುಳ್ಯದಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

 

ಮೃತ ಯುವಕನನ್ನು ವಿಷ್ಣುಪ್ರಸಾದ್ ಮೇನಾಲ ಎಂದು ಗುರುತಿಸಲಾಗಿದೆ.ಯುವಕನು ಎರಡು ವಾರಗಳ ಹಿಂದೆ ರಾತ್ರಿ ಹೊತ್ತು ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ, ಶ್ರೀರಾಮ್ ಪೇಟೆಯ ಸರ್ಕಾರಿ ಆಸ್ಪತ್ರೆ ಎದುರುಗಡೆ ಕಾರೊಂದು ಡಿಕ್ಕಿ ಹೊಡೆದಿತ್ತು.

ಅಪಘಾತದ ತೀವ್ರತೆಗೆ ಯುವಕನ ಕೈಕಾಲು-ತಲೆಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ವಾರಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವಿಷ್ಣುಪ್ರಸಾದ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.