ಹವಾಮಾನ ಇಲಾಖೆಯಿಂದ ಈ ಮುಖ್ಯ ಸೂಚನೆ

ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ  ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲೂ ಮಾನ್ಸೂನ್  ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಆಗ್ನೇಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶ, ದಕ್ಷಿಣ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ನ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಬಾರಿ ಶೇ.99 ರಷ್ಟು ಮಳೆಯಾಗುವ ನಿರೀಕ್ಷೆಯಿದೆ.

Leave A Reply