ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಸಿಹಿಸುದ್ದಿ ಇದ್ದು, ಇಲ್ಲಿಯವರೆಗೆ ಯಾವುದೇ ಪರೀಕ್ಷೆ ಇಲ್ಲದೆ ಶುಲ್ಕ ಪಾವತಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕಿತ್ತು. ಆದರೀಗ ಸಮಾಜ ಕಲ್ಯಾಣ ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಿದೆ.

 

2022-23ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಮೇ 31ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆ ಜೂ.05 ರಂದು ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.