ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಮಾಹಿತಿ ವಿವರ:
ಹುದ್ದೆ : ಟೆಕ್ನಿಕಲ್ ಪ್ರೋಗ್ರಾಮರ್
ಉದ್ಯೋಗ ಸ್ಥಳ :ಬಳ್ಳಾರಿ
ವೇತನ : ಬಳ್ಳಾರಿ ಜಿಲ್ಲಾಧಿಕಾರಿ ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಬಿಇ ಅಥವಾ ಬಿಟೆಕ್, ಎಂಸಿಎ ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ಅನುಭವ : ಅಭ್ಯರ್ಥಿಗಳು ERMS, ERO ನೆಟ್ ಮುಂತಾದ ವಿತರಿಸಿದ ಡೇಟಾ ಸಿಸ್ಟಮ್ ಅಪ್ಲಿಕೇಶನ್‌ಗಳನ್ನು ನಿರ್ವಹಿಸುವಲ್ಲಿ ಕನಿಷ್ಠ 1 ವರ್ಷಗಳ ಅನುಭವವನ್ನು ಹೊಂದಿರಬೇಕು. ಇಂಗ್ಲಿಷ್ ಮತ್ತು ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ:
ಬಳ್ಳಾರಿ ಜಿಲ್ಲಾಧಿಕಾರಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, deo.bellary@gmail.com ಗೆ ಮೇ 29ರೊಳಗೆ ಸಲ್ಲಿಸಬಹುದು.
ವಿಶೇಷ ಸೂಚನೆ:
ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಂತ್ರಿಕ ಪ್ರೋಗಾಮರ್ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
*ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂಸ್ಥೆ ಹೊರಡಿಸಿರುವ ಅಧಿಸೂಚನೆ ಮತ್ತು ಅರ್ಹತಾ ಮಾನದಂಡವನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
*ಅಧಿಸೂಚನೆಯಲ್ಲಿ ನೀಡಿರುವ ನಿಗದಿತ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಬೇಕಿದೆ.
*ಭರ್ತಿ ಮಾಡಿದ ಅರ್ಜಿಯನ್ನು ಮೇಲೆ ತಿಳಿಸಿದ ಇ ಮೇಲ್ ಐಡಿಗೆ ಕಳುಹಿಸಬೇಕು
ಅಧಿಕೃತ ವೆಬ್‌ಸೈಟ್: ballari.nic.in