ರೈತರಿಗೆ ಭರ್ಜರಿ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲು ಉಚಿತ ಸೌರ ವಿದ್ಯುತ್ – ರಾಜ್ಯ ಸರಕಾರ

ರೈತರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ಫೀಡರ್ ಗಳ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ.

 

ಮೊದಲ ಹಂತದಲ್ಲಿ ಬೆಸ್ಕಾಂ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯಾಪ್ತಿಯಲ್ಲಿ 2.5 ಲಕ್ಷ ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ತ್ರಿಫೇಸ್ ಸೌರವಿದ್ಯುತ್ ಪೂರೈಕೆ ಮಾಡಲಾಗುತ್ತದೆ.

ಸೋಲಾರ್ ಫೀಡರ್ ನಿಂದ 2.5 ಲಕ್ಷ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡಲಿದ್ದು ಸರ್ಕಾರಕ್ಕೆ ಸಬ್ಸಿಡಿ ಭಾರ ಕಡಿಮೆ ಆಗಲಿದೆ. ರೈತರ ಹೊಲಗಳಲ್ಲಿ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವ ಯೋಜನೆಗೆ ಮುಂದಿನ ವಿದ್ಯುತ್ ಪೂರೈಕೆ ಮಾಡುವ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡುವ ಸಾಧ್ಯತೆ ಇದೆ.

ಕಿಸಾನ್ ಉರ್ಜಾ ಸುರಕ್ಷಾ ಮತ್ತು ಉತ್ಥಾನ್ ಮಹಾ ಅಭಿಯಾನ್ ಯೋಜನೆಯಡಿ ಸೌರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಹಗಲು ವೇಳೆ ರೈತರಿಗೆ ತ್ರಿಫೇಸ್ ವಿದ್ಯುತ್ ಸಿಗಲಿದೆ. ಇದರಿಂದ ರಾಜ್ಯದಲ್ಲಿ 36 ಲಕ್ಷ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 26000 ಕೋಟಿ ರೂಪಾಯಿ ಸಬ್ಸಿಡಿ ಹೊರೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

ಸದ್ಯದ ಫೀಡರ್ ಗಳ ಮೂಲಕವೇ ಸೋಲಾರ್ ವಿದ್ಯುತ್ ಪೂರೈಕೆಗಾಗಿ ಕುಸುಮ್ -ಸಿ ಯೋಜನೆ ಜಾರಿಗೊಳಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಹಗಲು ಯಾವುದೇ ಅಡಚಣೆಯಿಲ್ಲದೆ ರೈತರಿಗೆ ವಿದ್ಯುತ್ ಪೂರೈಕೆ ಮಾಡುವುದರಿಂದ ಅನುಕೂಲವಾಗುತ್ತದೆ. ಸರ್ಕಾರದ ಮೇಲಿನ ಹೊರೆ ಕೂಡ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

Leave A Reply

Your email address will not be published.