ಕಲ್ಲಡ್ಕ : ಮಹಡಿ ಮೇಲಿನಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ತರಗತಿ ವಿದ್ಯಾರ್ಥಿಯೋರ್ವ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ದಲ್ಲಿ ಮೇ.26 ರಂದು ನಡೆದಿದೆ.

 

‌ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ.

ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಸಿಟಿಪ್ಲಾಜಾ ರೆಸಿಡೆನ್ಸಿಯ ಮೂರನೇ ಮಹಡಿಯ ಸೀಟ್ ಹೌಸ್ ನಲ್ಲಿ ಸಾಹಿಲ್ ಗೆಳೆಯರ ಜೊತೆ ಆಟ ಆಡುತ್ತಿದ್ದ.ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

Leave A Reply

Your email address will not be published.