KPSC ಯಿಂದ ಮತ್ತೊಂದು ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ ಸಿ) ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಆಯ್ಕೆಪಟ್ಟಿ, ತಾತ್ಕಾಲಿಕ ಆಯ್ಕೆಪಟ್ಟಿ, ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕೆಪಿಎಸ್ ಸಿ ಇದೀಗ 2019ನೇ ಸಾಲಿನಲ್ಲಿ ಅಧಿಸೂಚಿಸಲಾದ  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಎಂಆರ್‌ಎಸಿ ಹುದ್ದೆಗಳಿಗೆ ಪ್ರಾವಿಷನಲ್ ಸೆಲೆಕ್ಟ್ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ.

 

ಹುದ್ದೆ : ಎಂಆರ್‌ಎಸಿ

ನೇಮಕ ಪ್ರಾಧಿಕಾರ : ಆಯುಕ್ತರು ಇಲಾಖೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 25 09-2019 ರಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಎಂಆರ್‌ಎಸಿ ಪೋಸ್ಟ್‌ಗಳಿಗೆ ನೋಟಿಫಿಕೇಶ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ವೃಂದ ಮತ್ತು ಮೀಸಲಾತಿ ನಿಯಮಾನುಸಾರ ತಾತ್ಕಾಲಿಕ ಆಯ್ಕೆಪಟ್ಟಿ ಸಿದ್ಧಪಡಿಸಿ ಬಿಡುಗಡೆ ಮಾಡಿದೆ.

ಮೇ 25 ರಂದು ಈ ಸದರಿ ಹುದ್ದೆಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆ ಏನಾದರೂ ಇದ್ದಲ್ಲಿ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.