ಮೇಯರ್ ಸ್ಥಾನಕ್ಕಾಗಿ ಗುಪ್ತ ಸಭೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಯ್ಕೆಗೆ ಒಂದು ದಿನ ಬಾಕಿ ಇರುವಾಗಲೇ ಮೇಯರ್ ಆಯ್ಕೆಗಾಗಿ ಬಿಜೆಪಿ ವಲಯದಲ್ಲಿ ಗುಪ್ತ ಸಭೆ ನಡೆದಿದೆ.
ಪಾಲಿಕೆಯಲ್ಲಿ ಅತೀ ಹೆಚ್ಚು 39 ಸದಸ್ಯರನ್ನು ಹೊಂದಿರುವ ಬಿಜೆಪಿ ಸಂಘ ಪರಿವಾರದವರಿಗೆ ಮೇಯರ್ ಪಟ್ಟ ನೀಡಲು ಮುಂದಾಗಿದೆ ಎಂಬ ಮಾತುಗಳು ಇದೀಗ ಬಿಜೆಪಿಯಲ್ಲಿ ಕೇಳಿ ಬರುತ್ತಿವೆ.
ಮೇಯರ್ ಸ್ಥಾನಕ್ಕೆ ಸಾಮಾನ್ಯ ಅಭ್ಯರ್ಥಿ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಅಭ್ಯರ್ಥಿ ಮೀಸಲಾತಿ ಇದ್ದು, ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.
ಹುಬ್ಬಳ್ಳಿಗೆ ಮೇಯರ್ ಸ್ಥಾನ ನೀಡಬೇಕೋ, ಧಾರವಾಡ ಸದಸ್ಯರಿಗೆ ಮೇಯರ್ ಸ್ಥಾನ ನೀಡಬೇಕೊ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಹುಬ್ಬಳ್ಳಿಯಲ್ಲಿ ನಡೆದಿರುವ ಸಭೆಯಲ್ಲಿ ಯಾರಿಗೆ ಮೇಯರ್ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕು ಎಂದು ಕಳೆದ ಒಂದು ವರ್ಷದಿಂದ ಹೋರಾಟ ನಡೆಸಲಾಗುತ್ತಿದ್ದು, ಈ ಬಾರಿ ಧಾರವಾಡಕ್ಕೆ ಮೇಯರ್ ಪಟ್ಟ ನೀಡಬಹುದು ಎಂದು ಹೇಳಲಾಗುತ್ತಿದೆ.