ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ | ಉಚಿತ ಊಟ ಮತ್ತು ವಸತಿ ವ್ಯವಸ್ಥೆ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗುವುದು.

ಅರ್ಹತೆ : ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿರಬೇಕು. ವಯೋಮಿತಿ ಕನಿಷ್ಟ 10 ವರ್ಷ ಹಾಗೂ ಗರಿಷ್ಟ 15 ವರ್ಷಗಳು
(ಒಂದುವೇಳೆ ಅಧ್ಯಯನ ಮಾಡುತ್ತಿರುವ 15 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳು ದೊರೆಯದ ಪಕ್ಷದಲ್ಲಿ ಮಾತ್ರ 18 ವರ್ಷದವರೆಗಿನ ಮಕ್ಕಳನ್ನು ಸ್ವಲ್ಪಮಟ್ಟಿಗೆ ಸೇರಿಸಲು ಅವಕಾಶ ನೀಡಲಾಗುವುದು.)

ಸೌಲಭ್ಯಗಳ ವಿವರ : ಉಚಿತ ಊಟ ಮತ್ತು ವಸತಿ ವ್ಯವಸ್ಥೆ/ವಸತಿಯೇತರ ವಿದ್ಯಾರ್ಥಿಗಳಿಗೆ ಅವಕಾಶ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನ ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ.
ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಒದಗಿಸಲಾಗುವಂತೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ, ಸಾಮಾಗ್ರಿ, ಜಮಖಾನ ಹಾಸಿಗೆ, ಹೊದಿಕೆ, ಕ್ಷೌರದ ವೆಚ್ಚ ಇತ್ಯಾದಿಗಳನ್ನು ಒದಗಿಸಲಾಗುವುದು
ವಿದ್ಯಾರ್ಥಿಗೆ ಮಾಸಿಕ ತರಬೇತಿ ಭತ್ಯೆ 500/-ರೂ ರಂತೆ
ನೀಡಲಾಗುವುದು.

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇದರ ಮೂಲಕ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿಯನ್ನು ನೀಡಲಾಗುವುದು (2022-23ನೇ ಸಾಲಿಗೆ ಖಾಲಿ ಇರುವ 14 ಡೋಲು ತರಬೇತಿಯ ಸ್ಥಾನಗಳು ಮತ್ತು 10 ನಾದಸ್ವರ ತರಬೇತಿಯ ಸ್ಥಾನಗಳನ್ನು ತುಂಬಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ :

ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಮೇ 31,2022ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ತಿಳಿಸಿದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :
ಜನನ ಪ್ರಮಾಣ ಪತ್ರ/ವರ್ಗಾವಣೆ ಪ್ರಮಾಣ ಪತ್ರ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‌ ಪ್ರತಿ
ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಓದಿರುವ ಶಾಲೆ ಹಾಗೂ ಉತ್ತೀರ್ಣವಾಗಿರುವ ತರಗತಿಯ ಬಗ್ಗೆ ಅದೇ ಶಾಲೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪ್ರತಿ.

ಸಹಾಯಕ ವಾಣಿ : 8050770004

ಅಧಿಕೃತ ವೆಬ್‌ಸೈಟ್ : https://bcwd.karnataka.gov.in/

Leave A Reply

Your email address will not be published.