ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ !!!

3-4 ದಿನಗಳಲ್ಲಿ ಮುಂಗಾರು ಈಶಾನ್ಯ ರಾಜ್ಯಗಳಿಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಹೇಳಿದೆ. ನೈಋತ್ಯ ಮಾನ್ಸೂನ್ 3-4 ದಿನಗಳಲ್ಲಿ ಬಂಗಾಳಕೊಲ್ಲಿಯ ಹೆಚ್ಚಿನ ಭಾಗಗಳನ್ನು ಆವರಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

 

ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ ಪ್ರವೇಶವಾಗಲಿದೆ. ಹಾಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು. ಮುಂದಿನ 2-3 ದಿನಗಳಲ್ಲಿ ಬೆಂಗಳೂರಿನಲ್ಲಿ 7 ಮಿಲಿಮೀಟರ್ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು-ಮೂರು ದಿನಗಳಲ್ಲಿ ಹಗುರವಾದ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈಋತ್ಯ ಮಾನ್ಸೂನ್ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳಿಗೆ, ಕೇರಳದ ಕೆಲವು ಭಾಗಗಳು, ತಮಿಳುನಾಡಿನ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು ಮತ್ತು ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಮುಂದಿನ 3-4 ದಿನಗಳಲ್ಲಿ ಬಂಗಾಳಕೊಲ್ಲಿಯ ಈಶಾನ್ಯ ಭಾಗಗಳು ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಮತ್ತಷ್ಟು ಮುಂದಕ್ಕೆ ಹೋಗಲಿದೆ ಅಂತ ತಿಳಿಸಿದೆ.

Leave A Reply

Your email address will not be published.