ಕರಾವಳಿಯ ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಯ ಜೊತೆ ಪ್ರೀತಿ ನಾಟಕವಾಡಿ ಸಾವಿಗೆ ಕಾರಣನಾದವ ಅರೆಸ್ಟ್ !!!

ಕುಂದಾಪುರ: ಯುವತಿಯನ್ನು ಪ್ರೀತಿಸುವ ನಾಟಕವಾಡಿ
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲೆ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು.

ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32) ಎಂಬಾತನ ಪ್ರೀತಿಯ ಬಲೆಗೆ ಬಿದ್ದಿದ್ದಳು. ಮದುವೆಯಾಗುವುದಾಗಿ ನಂಬಿಸಿದ ಅಜೀಜ್ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟಿದ್ದ. ಇಬ್ಬರ ನಡುವೆ ನಡೆದಿರುವ ದೈಹಿಕ ಸಂಪರ್ಕದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಇದರಿಂದ ಮನನೊಂದಿದ್ದ ಯುವತಿ ಇಲಿ ಪಾಷಾಣ ಸೇವಿಸಿದ್ದಳು. ಮೂರು ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಪ್ರಾಣ ಬಿಟ್ಟಿದ್ದಳು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಘಟನೆ ನಂತರ ಅಜೀಜ್ ತಲೆಮರೆಸಿಕೊಂಡಿದ್ದ. ಇದೀಗ ಕೊನೆಗೂ ಅಜೀಜ್ ಸಿಕ್ಕಿಬಿದ್ದಿದ್ದಾನೆ. ಆತನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಲವ್ ಜಿಹಾದ್ ಪ್ರಕರಣ ಖಂಡಿಸಿ ಪ್ರತಿಭಟನೆಗೆ ಬಜರಂಗದಳದವರು ಕರೆ ನೀಡಿದ್ದಾರೆ. ನಾಳೆ (ಮಂಗಳವಾರ) ಕುಂದಾಪುರದಲ್ಲಿ ಪ್ರತಿಭಟನೆ ನಡೆಯಲಿದೆ.

Leave a Reply

error: Content is protected !!
Scroll to Top
%d bloggers like this: