ಮಂಗಳೂರು : ಡಿವೈಡರ್ ಗೆ ಸ್ಕೂಟರ್ ಡಿಕ್ಕಿ, ಇಬ್ಬರು ಗಂಭೀರ

0 11

ಮಂಗಳೂರು : ಅತೀವೇಗದಿಂದ ಚಲಾಯಿಸಿಕೊಂಡು ಬಂದ ಸ್ಕೂಟರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.

ಗಾಯಾಳುಗಳನ್ನು ಬಿದ್ದ ಗಣೇಶ್ ಹಾಗೂ ಧೀರಜ್ ಎಂದು ಗುರುತಿಸಲಾಗಿದೆ.

ಮೇ 29 ಭಾನುವಾರ ಮುಂಜಾನೆ ಘಟನೆ ನಡೆದಿದ್ದು, ಗಣೇಶ್ ಎಂಬಾತ ಧೀರಜ್ ನನ್ನು ಮನೆಗೆ ಬಿಟ್ಟು ಬರಲು ತೆರಳಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಸುಕಿನ ವೇಳೆ 2.3೦ ರ ಸಮಯದಲ್ಲಿ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುವ ಆಟೋ ಚಾಲಕ ಪ್ರವೀಣ್ ಕುಮಾರ್ ಇದನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply