ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ದಾರುಣ ಸಾವು

Share the Article

ಮರದ ರೆಂಬೆ ಕಡಿಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿ ದೂಮ ನಾಯ್ಕ (65) ಮೃತ ವ್ಯಕ್ತಿ.

ಮನೆ ಸಮೀಪದ ಮರದ ರೆಂಬೆ ಕಡಿಯಲೆಂದು ಧೂಮ ನಾಯ್ಕ ಅವರು ಮರಕ್ಕೆ ಹತ್ತಿ ರೆಂಬೆ ಕಡಿಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply