ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣಾ ಅರ್ಜಿಯನ್ನು ಹೈಕೋರ್ಟ್ ಮುಂದೂಡಿಕೆ

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು, ಹೈಕೋರ್ಟ್ ಜೂನ್ 27ಕ್ಕೆ ಮುಂದೂಡಿದೆ.

 

ಸಂತ್ರಸ್ತೆ ಸಲ್ಲಿಸಿರುವ ಎರಡು ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲೆ ಆಕೃತಿ ಧವನ್, ‘ಸಂತ್ರಸ್ತೆಯ ಪರ ಇಂದಿರಾ ಜೈಸಿಂಗ್ ಪ್ರತಿನಿಧಿಸುತ್ತಿದ್ದಾರೆ. ಆದರೆ, ಅವರು ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಅದ್ದರಿಂದ, ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಜೂನ್ 27ರಂದು ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು.

Leave A Reply

Your email address will not be published.