ಕರಾವಳಿ ಲವ್ ಜಿಹಾದ್ ಪ್ರಕರಣ: ಬಂಧಿತ ಆರೋಪಿ ಅಜೀಜ್ ಗೆ 7 ದಿನಗಳ ಪೊಲೀಸ್ ಕಸ್ಟಡಿ

ಕುಂದಾಪುರ: ಯುವತಿಯನ್ನು ಪ್ರೀತಿಸುವ ನಾಟಕವಾಡಿ
ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು.

ನಿನ್ನೆ ಆರೋಪಿ ಅಜೀಜ್ ನ ಬಂಧನ ಮಾಡಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದ್ದ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಪ್ರಕರಣ ಪ್ರಮುಖ ಆರೋಪಿ ಅಜೀಜ್ ಮತ್ತು ಅವನಿಗೆ ಸಹಾಯ ಮಾಡಿದ ರಹೀಮ್ ನನ್ನು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ಅಜೀಜ್ ನನ್ನು ಏಳು ದಿನಗಳ ಅವಧಿಗೆ ಪೋಲಿಸ್ ಕಸ್ಟಡಿಗೆ ನೀಡಲಾಗಿದೆ. ರಹೀಮ್ ನನ್ನು 14 ದಿನಗಳ ಅವಧಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂದಿಸಿದ ಇನ್ನೋರ್ವ ಆರೋಪಿ ರಶೀದ್ ನನ್ನು ವಶಕ್ಕೆ ಪಡೆಯಲಾಗಿದ್ದು, ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ.

Leave A Reply