ಪ್ರಕಾಶ ಹುಕ್ಕೇರಿ-ಸುನೀಲ್‌ ಸಂಕ ಗೆಲುವಿಗೆ ಶ್ರಮಿಸಿ : ಸತೀಶ್ ಜಾರಕಿಹೊಳಿ

ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು.

ಇಲ್ಲಿನ ರವದಿ ಪಾರ್ಮ್‌ ಹೌಸ್‌ ನಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಪದವೀಧರರ ಮತಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿಯವರು ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯರಾಗಿದ್ದು, ಸುಮಾರು 30 ವರ್ಷ ರಾಜಕಾರಣದಲಿದ್ದು, ಸಾರ್ವಜನಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಈಗ ಶಿಕ್ಷಕರ ಅಭಿವೃದ್ಧಿಗಾಗಿ ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದು ತಿಳಿಸಿದರು.
ಯಾವುದೇ ಚುನಾವಣೆ ಇರಲಿ ಚುನಾವಣೆಯಲ್ಲಿ ನಿಲ್ಲಲು ಆಸಕ್ತಿ ಇರಬೇಕು. ಆ ಒಂದು ಆಸಕ್ತಿಯನ್ನು ನಾವು ಪ್ರಕಾಶ ಹುಕ್ಕೇರಿಯವರಲ್ಲಿ ಕಂಡಿದ್ದೇವೆ. ಅಭ್ಯರ್ಥಿ ಘೋಷಣೆಗೂ ಮುನ್ನ ಪ್ರಕಾಶ ಹುಕ್ಕೇರಿ ಅವರು ಸಾಕಷ್ಟು ಶಿಕ್ಷಕರನ್ನು ಭೇಟಿ ಮಾಡಿದ್ದು, ಶಿಕ್ಷಕರೂ ಕೂಡ ಪ್ರಕಾಶ ಹುಕ್ಕೇರಿಯವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು ಎಂದು ಹೇಳಿದರು.

ಬಿಜೆಪಿಯ ಯೋಜನೆಗಳು ಘೋಷಣೆಗೆ ಮಾತ್ರ ಸೀಮಿತವಾಗಿದ್ದು, ಅವುಗಳು ಸಾರ್ವಜನಿಕರಿಗೆ ಉಪಯೋಗ ಆಗುತ್ತಿಲ್ಲ. ಪೆಟ್ರೋಲ್‌ – ಡೀಸೆಲ್‌ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಏರಿದ್ದು, ಜನ-ಸಾಮಾನ್ಯರು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಾಗ ಮಾತ್ರ ಸಾಮಾನ್ಯ ಜನ ನೆಮ್ಮದಿ ಜೀವನ ನಡೆಸಲು ಸಾಧ್ಯವಿದೆ ಎಂದರು.

ಜಾತಿ ರಾಜಕಾರಣ ಇಡೀ ಸಮಾಜಕ್ಕೆ ಮಾರಕಾಗಿದ್ದು, ಈಚೆಗೆ ದೇಶ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸರಿಯಲ್ಲ. ಇಂತಹ ಬೆಳವಣಿಗೆಗಳನ್ನು ತಡೆಯಲು ಶಿಕ್ಷಕರು ಮತ್ತು ಪದವೀಧರರು ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಸುಳ್ಳನ್ನು ಸತ್ಯ ಮಾಡುವುದೇ ಬಿಜೆಪಿಯವರ ಕೆಲಸವಾಗಿದ್ದು, ಸುಳ್ಳನ್ನೆ ಬಂಡವಾಳ ಮಾಡಿಕೊಂಡು ದೇಶ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದ್ದು, ಇದನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯನವರು ಸಿಎಂ ಇದ್ದಾಗ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ತಿಳಿಸಿಬೇಕೆಂದರು.
ಈ ಸಂದರ್ಭದಲ್ಲಿ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ, ಪದವೀಧರರ ಮತಕ್ಷೇತ್ರದ ಅಭ್ಯರ್ಥಿ ಸುನೀಲ್‌ ಸಂಕ, ಮಾಜಿ ಸಚಿವ ಎ.ಬಿ. ಪಾಟೀಲ, ವಿಜಯ ರವದಿ, ಸಂತೋಷ ಬುಡಶಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಜಿಂಗಳೆ, ಬಸವರಾಜ ಪಾಟೀಲ್‌, ಶ್ಯಾನೂಲ್ ತಹಶೀಲ್ದಾರ್‌ ಸೇರಿದಂತೆ ಇತರರು

Leave A Reply

Your email address will not be published.