ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಮೇಲೆ ಎಫ್ಐಆರ್ ದಾಖಲು !!

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಹೊಸ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 8 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್ ಬೌನ್ಸ್ ಚೆಕ್‌ಗೆ ಸಂಬಂಧಿಸಿದಂತೆ ಬಿಹಾರದ ಬೇಗುಸರಾಯ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಎಸ್‌ಕೆ ಎಂಟರ್‌ಪ್ರೈಸಸ್ ಹೆಸರಿನ ಕಂಪನಿಯು ಬೇಗುಸರಾಯ್‌ನ ಸಿಜೆಎಂ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಿಸಿದೆ, ಪ್ರಕರಣ ದಾಖಲಿಸಿದವರು ‘ನ್ಯೂ ​​ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್’ ನಿಂದ ಪಡೆದ 30 ಲಕ್ಷ ರೂಪಾಯಿ ಮೌಲ್ಯದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿದ್ದಾರೆ. ಧೋನಿ ಉತ್ಪನ್ನದ ಪ್ರಚಾರ ಮಾಡಿದ್ದರು, ಹಾಗಾಗಿ ದೂರುದಾರರು ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಮಿಶ್ರಾ ಅವರಿಗೆ ಕಳುಹಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಜೂನ್ 28 ರಂದು ನಡೆಯಲಿದೆ.

ಧೋನಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದು ಹೇಗೆ?

ವರದಿಗಳ ಪ್ರಕಾರ, ಧೋನಿ ಎಸ್‌ಕೆ ಎಂಟರ್‌ಪ್ರೈಸಸ್ ಮತ್ತು ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್ ಒಪ್ಪಂದಕ್ಕೆ ಸಹಿ ಹಾಕಿದ್ದರು. ನಂತರ 30 ಲಕ್ಷ ರೂಪಾಯಿ ಮೌಲ್ಯದ ರಸಗೊಬ್ಬರಗಳನ್ನು ಕಂಪನಿಯು ವಿತರಿಸಿತು. ಆದರೆ ಮಾರಾಟಗಾರನು ಒದಗಿಸಿರುವ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗದೆ ಉಳಿದಿದೆ. ಹೀಗಾಗಿ ಕಂಪನಿಯು ಉಳಿದ ರಸಗೊಬ್ಬರವನ್ನು ವಾಪಸ್ ತೆಗೆದುಕೊಂಡಿದ್ದು, ಅದರ ಬದಲಾಗಿ ಏಜೆನ್ಸಿಗೆ 30 ಲಕ್ಷ ರೂ.ಗಳ ಚೆಕ್ ನೀಡಿದ್ದು, ಈ ಚೆಕ್ ಬೌನ್ಸ್ ಆಗಿದೆ.

ಇದರ ನಂತರ, ಕಂಪನಿಗೆ ಲೀಗಲ್ ನೋಟಿಸ್ ನೀಡಲಾಯಿತು. ಆದರೆ ಏಜೆನ್ಸಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಆದ್ದರಿಂದ, ಎಸ್‌ಕೆ ಎಂಟರ್‌ಪ್ರೈಸಸ್‌ನ ಮಾಲೀಕ ನೀರಜ್ ಕುಮಾರ್ ನಿರಾಲಾ ಅವರು ಸಂಬಂಧಿಸಿದ ರಸಗೊಬ್ಬರವನ್ನು ಪ್ರಚಾರ ಮಾಡಿದ ಎಂಎಸ್ ಧೋನಿ ಮತ್ತು ಇತರ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

error: Content is protected !!
Scroll to Top
%d bloggers like this: