ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ; ರಾಜ್ಯಕ್ಕೆ ಮತ್ತೆ ಬೀಳುತ್ತಾ ಬೀಗ !! | ಲಾಕ್ ಡೌನ್ ಕುರಿತು ಸುಳಿವು ನೀಡಿದ ಸಚಿವರು
ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡುಬರುತ್ತಿದೆ. ಅದರಲ್ಲೂ
ಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತುಂಬಾನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ತೀವ್ರ ಐಸಿಯುಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ಡೌನ್ ಹೇರುವ ಸಾಧ್ಯತೆ ದಟ್ಟವಾಗಿದೆ.
ಜೊತೆಗೆ ಸಚಿವರೋರ್ವರು ಲಾಕ್ಡೌನ್ ಜಾರಿಯ ಕುರಿತು ಸುಳಿವು ಕೊಟ್ಟಿದ್ದಾರೆ. ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಮೂರು ಅಲೆಗಳಲ್ಲೂ ಮಹಾರಾಷ್ಟ್ರ ತತ್ತರಿಸಿ ಹೋಗಿತ್ತು. ಆದರೆ ಕಳೆದ ಕೆಲ ತಿಂಗಳಿನಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಈ ನಡುವಲ್ಲೇ ಕೋವಿಡ್ ವೈರಸ್ ಸೋಂಕಿನ ಪ್ರಕರಣ ಹೆಚ್ಚಳವಾಗಲು ಆರಂಭವಾಗಿದೆ. ಅದ್ರಲ್ಲೂ ಮುಂಬೈ ಮಹಾನಗರದಲ್ಲಿಯೇ ಸೋಂಕಿತ ಪ್ರಕರಣ ಹೆಚ್ಚುತ್ತಿದ್ದು, ಆಸ್ಪತ್ರೆಗೆ ದಾಖಲಾಗುವ ಜನರ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಲೇ ಇದೆ. ಇದು ರಾಜ್ಯ ಸರ್ಕಾರದ ತಲೆನೋವಿಗೆ ಕಾರಣವಾಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ನಡುವಲ್ಲೇ, ಮುಂಬೈ ನಗರ ರಕ್ಷಕ ಸಚಿವ ಅಸ್ಲಾಮ್ ಶೇಖ್ ಕೋವಿಡ್ -19 ಪ್ರಕರಣಗಳ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ಲಾಕ್ಡೌನ್
ಜಾರಿಯಾಗಲಿದೆ ಎಂದಿದ್ದಾರೆ.
ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯನ್ನು ಗಮನಿಸಿದ್ರೆ, ಹಲವು ನಿರ್ಬಂಧವನ್ನು ಜಾರಿಗೊಳಿಸಲೇ ಬೇಕಾಗಿದೆ. ವಿಮಾನಯಾನ ಸೇವೆಯಲ್ಲಿ ಸದ್ಯ ನಿರ್ಬಂಧ ಜಾರಿಯಲ್ಲಿದೆ. ಜನರು ಕಾಳಜಿ ವಹಿಸದೇ ಇದ್ರೆ ಲಾಕ್ಡೌನ್ ಜಾರಿಯಾಗುವುದು ಖಚಿತ ಎಂದಿದ್ದಾರೆ.
ಮಹಾರಾಷ್ಟ್ರದ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಮಹಾರಾಷ್ಟ್ರದಲ್ಲಿ ಮಂಗಳವಾರ 711 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಹಿಂದಿನ ದಿನ 431 ರಿಂದ ತೀವ್ರ ಏರಿಕೆ ಕಂಡಿದೆ. ಇದು ಫೆಬ್ರವರಿ 27 ರ ನಂತರದಲ್ಲಿ ದಾಖಲಾದ ಗರಿಷ್ಠ ದೈನಂದಿನ ಸೋಂಕಿತರ ಸಂಖ್ಯೆಯಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 2,745 ಹೊಸ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ದೇಶದ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಈಗ 4,31,60,832 ಆಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, 6 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,24,636 ಕ್ಕೆ ಏರಿಕೆ ಕಂಡಿದೆ.