ಆರ್ ಎಸ್ ಎಸ್ ಕುರಿತು ಸರಣಿ ಟ್ವೀಟ್ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗಳು ಇವು

ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್ ಎಸ್ ಎಸ್ ಕುರಿತಾಗಿ ಸರಣಿ ಟ್ವೀಟ್ ಮಾಡಿದ್ದು ಹೀಗೆ ಬರೆದುಕೊಂಡಿದ್ದಾರೆ.

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ RSS ಬಗ್ಗೆ ಭಯ ಇದೆ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ ಇದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಗುಡುಗಿದ್ದಾರೆ.

ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿವಿ ಸದಾನಂದಗೌಡ ಅವರು ಯಾಕೆ ತನ್ನ‌ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್ ಎಸ್ ಎಸ್ ಮೇಲೆ ದೇಶದ ಮೊದಲ ಗೃಹಸಚಿವ‌ ವಲ್ಲಭಭಾಯಿ‌ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ
ಎಂದಿದ್ದಾರೆ.

ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ ಎಂದು ತಿಳಿಸಿದ್ದಾರೆ.

Leave A Reply

Your email address will not be published.