ಮಂಗಳೂರು : ರಕ್ತಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ಕಡಲನಗರಿ ಮಂಗಳೂರು ಪೊಲೀಸರ ಬಲೆಗೆ
ಮಂಗಳೂರು: ಕೋಟಿ ಕೋಟಿ ಮೌಲ್ಯದ ರಕ್ತ ಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ವೊಂದು ಮಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಬಲೆಗೆ ಬಿದ್ದಿದೆ. ಥೇಟ್ ಸಿನಿಮಾ ಸ್ಟೈಲ್ ನಲ್ಲಿ ಸೇಫಾಗಿ ಆಂಧ್ರದಿಂದ ಮಂಗಳೂರಿಗೆ ತಲುಪಿದ್ದ ಕಳ್ಳರ ಗ್ಯಾಂಗ್ ಮಂಗಳೂರು ಪೊಲೀಸರ ಖೆಡ್ಡಾಕ್ಕೆ ಬಿದ್ದಿರೋದಾದ್ರು ಹೇಗೆ ಅನ್ನೋ ಡಿಟೈಲ್ ಸ್ಟೋರಿ ಇಲ್ಲಿದೆ.
ಮಂಗಳೂರು ನಗರದ ಹೊರವಲಯದ ಮುಲ್ಕಿ ಗ್ರಾಮದ ಕಿಲ್ಪಾಡಿ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಬರೋಬ್ಬರಿ 5 ಕೋಟಿ ಮೌಲ್ಯದ ರಕ್ತಚಂದನ ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯೇ ಉಡುಪಿ ಹಾಗೂ ಮಂಗಳೂರು ಅರಣ್ಯ ವಿಚಕ್ಷಣ ದಳಕ್ಕೆ ಮಾಹಿತಿ ಬಂದಿದ್ದು, ಈ ಬಗ್ಗೆ ಗೌಪ್ಯ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದ ಅರಣ್ಯ ಇಲಾಖೆ ಟೀಂ,. ರಕ್ತ ಚಂದನ ವಶಕ್ಕೆ ಪಡೆದು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಆಂಧ್ರ ಪ್ರದೇಶ ದಟ್ಟ ಅರಣ್ಯದಿಂದ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿ ತಂದು ಕೇರಳಕ್ಕೆ ಮಾರಾಟ ನಡೆಸಲು ತರುತ್ತಿದ್ದರು. ಈ ಕಳ್ಳ ಸಾಗಾಟದ ಬಗ್ಗೆ ಮೊದಲೇ ಮಾಹಿತಿ ತಿಳಿದಿದ್ದ ಅರಣ್ಯ ಇಲಾಖೆಯ ತಂಡ ದೊಡ್ಡ ಕುಳಗಳನ್ನೇ ಬಲೆಗೆ ಹಾಕಿಕೊಂಡಿದೆ.