ಬೆಳ್ಳಂಬೆಳಗ್ಗೆ ಕಾರು-ಟಿಟಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

Share the Article

ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನೋವಾ ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತವೊಂದು ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ‌‌

ಈ ಘಟನೆ ತುಮಕೂರು ತಾಲೂಕಿನ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ.

ಶನಿವಾರ ಬೆಳಗ್ಗೆ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಇನೋವಾ ಕಾರು ತೆರಳುತ್ತಿತ್ತು. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿತ್ತು. ಮಾರ್ಗಮಧ್ಯೆ ಬೇಗೂರು ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಡಿವೈಡರ್ ದಾಟಿ ಟಿಟಿ ವಾಹನಕ್ಕೆ ಡಿಕ್ಕಿಯಾಗಿದೆ.

ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದ ದುರಂತ ಅಂತ್ಯಕಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪಕ್ಕದಲ್ಲಿ ಸಾಗುತ್ತಿದ್ದ ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರು ಮೂಲದ ಸುನಿಲ್ ಮೃತ ದುರ್ದೈವಿ. ಮತ್ತೊಬ್ಬನ ಮೃತನ ಹೆಸರು ಇನ್ನೂ ಗೊತ್ತಾಗಿಲ್ಲ. ಗಾಯಗಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Leave A Reply