ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ | 8 ಮಂದಿ ದುರ್ಮರಣ, 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

Share the Article

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.

ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಅಗ್ನಿಯ ಜ್ವಾಲೆ ಇಡೀ ಕಾರ್ಖಾನೆಗೆ ವ್ಯಾಪಿಸುವ ಅಪಾಯವಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಅಗ್ನಿ ಅವಘಡದ ಕುರಿತು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ ಐಜಿ ಪ್ರವೀಣ್ ಕುಮಾರ್ ಹೇಳಿದ್ದಾರೆ.

Leave A Reply