ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!
ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ ನೇತೃತ್ವದ ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.
ಪ್ರಸ್ತುತ ಸಮಿತಿ ಪರಿಷ್ಕರಿಸುವ ಪಠ್ಯದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳಿದ್ದಲ್ಲಿ ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರಕಾರ ಹೊಂದಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ ಅಧಿಕೃತ ಮಾಹಿತಿ ನೀಡಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೀಡಿದ ವಿವರ ಹೀಗಿದೆ.
- ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿರುವುದರಿಂದ
ಸಮಿತಿ ವಿಸರ್ಜನೆ ಮಾಡಲಾಗಿದೆ. - ಪ್ರಸ್ತುತ ಪಠ್ಯದಲ್ಲಿ ಮತ್ತೆ ಪರಿಷ್ಕರಣೆ ಇದ್ದರೆ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ. ಜೊತೆಗೆ ಬಸವಣ್ಣನವರ ಕುರಿತ ಪಠ್ಯ ಪರಿಷ್ಕರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.
- ಕುವೆಂಪು ಅವರ ನಾಡಗೀತೆ ಆಕ್ಷೇಪಾರ್ಹ
ವಿಕೃತಗೊಳಿಸಿದ ಪಠ್ಯ ಉಲ್ಲೇಖವಾಗಿಲ್ಲ. ಇದರ ಮೂಲ ಕವನ ಬರೆದ ವ್ಯಕ್ತಿಗಳ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. 4. ಬರಗೂರು ರಾಮಚಂದ್ರಪ್ಪ ಅವರ ಸಮಿತಿಗಿಂತ ಈಗಿನ ರೋಹಿತ್ ಚಕ್ರತೀರ್ಥ ಅವರ ಸಮಿತಿ ಕುವೆಂಪು ಅವರ ಗದ್ಯ, ಪದ್ಯವನ್ನು ಇನ್ನೂ ಮೂರು ಬಾರಿ ಹೆಚ್ಚು ಬಳಕೆ ಮಾಡಲಾಗಿದೆ. ಈ ಮೊದಲು ಕುವೆಂಪು ಅವರ ಸಾಹಿತ್ಯವನ್ನು ಏಳು ಬಾರಿ ಬಳಕೆ ಮಾಡಲಾಗಿತ್ತು. ಈಗ ಅದು 10ಕ್ಕೆ ಏರಿಕೆಯಾಗಿದೆ. - ನಾಡಪ್ರಭು ಕೆಂಪೇಗೌಡ ಅವರ ಪಠ್ಯದ ಸೇರ್ಪಡೆ
- ಇಸ್ಲಾಂ, ಕ್ರೈಸ್ತ ಧರ್ಮದ ಪರಿಚಯದ ಜೊತೆ ಹಿಂದೂ ಧರ್ಮ ವಿಷಯ ಸೇರ್ಪಡೆ ಮಾಡಲಾಗಿದೆ.
ರಾಜ್ಯದಲ್ಲಿ ಅನೇಕ ಬಾರಿ ಪಠ್ಯ ಪರಿಷ್ಕರಣೆ ಆಗಿದೆ. ಆಗೆಲ್ಲ ವಿರೋಧ ವ್ಯಕ್ತವಾಗಿದೆ. ಬರಗೂರು ಸಮಿತಿ ಬಗ್ಗೆ ಆಕ್ಷೇಪ ಬಂದಾಗ ಹೊಸ ಸಮಿತಿ ರಚನೆ ಮಾಡಲಾಗಿತ್ತು. ಬಸವಣ್ಣನ ಪಠ್ಯವನ್ನು ಯಾರ ಭಾವನೆಗೂ ದಕ್ಕೆಯಾಗದಂತೆ ಪರಿಷ್ಕರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ನಾಡಗೀತೆ ಬಗ್ಗೆ ಅವಹೇಳನಕಾರಿಯಾಗಿ ಬರೆದವರ ಬಗ್ಗೆ ತನಿಖೆಗಾಗಿ ಸೈಬರ್ ಕ್ರೈಂ ತಿಳಿಸಲಾಗಿದೆ. ನಾರಾಯಣ ಗುರು ಮತ್ತು ಭಗತ್ ಸಿಂಗ್ ಅವರ ಕುರಿತ ಪಾಠವನ್ನು ಬಿಟ್ಟಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ರಾಷ್ಟ್ರಕವಿ ಕುವೆಂಪುರವರ ಪಠ್ಯದಲ್ಲಿ ಹಿಂದೆ 8 ಇದ್ದದ್ದನ್ನು 7 ಮಾಡಲಾಗಿತ್ತು. ನಾವು 7 ರಿಂದ 10 ಮಾಡಿದ್ದೇವೆ. ನಾಡಪ್ರಭು ಕೆಂಪೇಗೌಡರ ಪಠ್ಯ ಸೇರಿಸಲಾಗಿದೆ ಎಂದು
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಪ್ರಸಕ್ತ ಪಠ್ಯ ಪರಿಷ್ಕರಣೆ ಮುಗಿದಿರುವದರಿಂದ ಪ್ರಸ್ತುತ ಸಮಿತಿಯನ್ನ ವಿಸರ್ಜಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ನೀಡಿದ್ದಾರೆ.
ಒಂದರಿಂದ ಹತ್ತನೇ ತರಗತಿ ಭಾಷಾ ಪಠ್ಯಪುಸ್ತಕದಲ್ಲಿ 45 ಪಠ್ಯ ಪರಿಷ್ಕರಿಸಲಾಗಿದೆ ಪ್ರಥಮ ಭಾಷೆ 33 ಪಾಠ/ಪದ್ಯಗಳು ದ್ವಿತೀಯ ಭಾಷೆ 8 ಪಾಠ/ ಪದ್ಯ ತೃತೀಯ ಭಾಷೆ 4 ಪಾಠ/ ಪದ್ಯ ಬದಲಾವಣೆ ಮಾಡಲಾಗಿದೆ.
ಯಥಾವತ್ತಾಗಿ ಉಳಿಸಿಕೊಂಡಿರುವ ಪಠ್ಯಗಳು
ಪ್ರಥಮ ಭಾಷೆ 165
ದ್ವಿತೀಯ ಭಾಷೆ 162
ತೃತೀಯ ಭಾಷೆ 94