ಹೋಟೆಲ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಇನ್ಮುಂದೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರ ಸೂಚನೆ
ನವದೆಹಲಿ: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಿಲ್ ಮೇಲೆ ‘ಸೇವಾ ಶುಲ್ಕ’ ವಿಧಿಸುವುದು ಕಾನೂನು ಬಾಹಿರ ಎಂದಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ, ಈ ಶುಲ್ಕವನ್ನು ವಿಧಿಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಗ್ರಾಹಕ ವ್ಯವಹಾರಗಳ ಸಚಿವಾಲಯವು ರೆಸ್ಟೋರೆಂಟ್ ಬಿಲ್‌ಗಳ ಮೇಲಿನ ಸೇವಾ ಶುಲ್ಕ ವಿಧಿಸುವ ವಿಚಾರವಾಗಿ ಚರ್ಚೆ ನಡೆಸಲು ಫೆಡರೇಶನ್ ಆಫ್ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ಜತೆ ಗುರುವಾರ ಸಭೆ ನಡೆಸಿದ್ದು ಈ ಕುರಿತು ಮಾಹಿತಿ ನೀಡಿದೆ.
ಶೀಘ್ರದಲ್ಲೇ ಈ ಕುರಿತು ಸಂವಿಧಾನಾತ್ಮಕವಾಗಿ ಕಾನೂನು ರೂಪಿಸಲಾಗುವುದು ಎಂದು ಸಚಿವಾಲಯ ಹೇಳಿದೆ. ರೆಸ್ಟೋರೆಂಟ್‌ಗಳಲ್ಲಿ ಶುಲ್ಕ ವಿಧಿಸುವುದನ್ನು ತಪ್ಪಿಸುವದರ ಜೊತೆಗೆ ಗ್ರಾಹಕರ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.