ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ !! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.


Ad Widget

Ad Widget

ತೆರೆದ ಪ್ರದೇಶಗಳನ್ನು ಹೊರತುಪಡಿಸಿ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಆದೇಶದಲ್ಲಿ ರೈಲುಗಳು, ಬಸ್‍ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಪ್ರದೀಪ್ ವ್ಯಾಸ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.


Ad Widget

ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಕೊರೋನಾ ನಿಯಂತ್ರಣದಲ್ಲಿತ್ತು. ಆದರೆ ಈ ನಡುವೆ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಏರಿಕೆ ಕಾಣುತ್ತಿದೆ. ಮೂರು ತಿಂಗಳ ಬಳಿಕ ಮೊದಲ ಬಾರಿ ನಿತ್ಯ ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳ ವರದಿಯಾಗುತ್ತಿದೆ. ಮುಂಬೈ, ಪುಣೆ, ಥಾಣೆಯಂತಹ ಮಹಾ ನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ವಾರಕ್ಕೆ ಹೋಲಿಸಿದರೆ ಕಳೆದೊಂದು ವಾರದಿಂದ ಒಂಭತ್ತು ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಬಿಎ.4 ಮತ್ತು ಬಿಎ.5 ಉಪವಿಭಾಗಗಳನ್ನು ಹೊಂದಿರುವ ರೋಗಿಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಹಿನ್ನೆಲೆ ನಾವು ಈ ಹಂತದಲ್ಲಿ ಎಚ್ಚರಿಕೆ ವಹಿಸುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Ad Widget

Ad Widget

Ad Widget

ಶುಕ್ರವಾರ 1,134 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಹೊಸ ಪ್ರಕರಣಗಳ ಪೈಕಿ 763 ಪ್ರಕರಣಗಳು ಮುಂಬೈನಿಂದಲೇ ವರದಿಯಾಗಿದೆ.

error: Content is protected !!
Scroll to Top
%d bloggers like this: